ದೇಶದಲ್ಲಿ ಕೊರೊನಾ ವೈರಸ್ ಆರ್ಭಟ-ನಿನ್ನೆ ಒಂದೇ ದಿನ 5,611 ಮಂದಿ ಸೋಂಕಿತರು ಪತ್ತೆ…

137
firstsuddi

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟ ಹೆಚ್ಚಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 5,611 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೇ ಒಂದೇ ದಿನ ದೇಶದಲ್ಲಿ 140 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,303ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 42,298 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಉಳಿದ 61,149 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.