ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,977 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆ…

213
firstsuddi

ನವದೆಹಲಿ : ದೇಶದಲ್ಲಿ ಲಾಕ್‍ಡೌನ್ ಸಡಿಲಿಕೆ ಆದಂತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,977 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಅಂದೇ ದಿನ 154ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,38,845 ಮಂದಿ ಸೋಂಕಿತರ ಪೈಕಿ 57,720 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 77,103 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.