ಭಾರತ ಹಾಕಿ ತಂಡದ ದಂತಕಥೆ ಬಲ್ಬೀರ್ ಸಿಂಗ್ ಸೀನಿಯರ್ ವಿಧಿವಶ…

186
firstsuddi

ನವದೆಹಲಿ : ಭಾರತೀಯ ಹಾಕಿ ಲೆಜೆಂಡ್ ಬಲ್ಬೀರ್ ಸಿಂಗ್ ಸೀನಿಯರ್(95) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಎರಡು ವಾರಗಳಿಂದ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಬಲ್ಬೀರ್ ಸಿಂಗ್ ಅವರನ್ನು ಮೊಹಾಲಿಯ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 6:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಬಲ್ಬೀರ್ ಸಿಂಗ್ ಒಲಂಪಿಕ್ ಫೈನಲ್ ಪಂದ್ಯದಲ್ಲಿ ಅತೀ ಹೆಚ್ಚು ಗೋಲ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಭಾರತದ ಶ್ರೇಷ್ಠ ಕೀಡಾಪಟುಗಳಲ್ಲಿ ಒಬ್ಬರಾಗಿರುವ ಬಲ್ಬೀರ್ ಸಿಂಗ್ ಅವರು ಅಂತರಾಷ್ಟ್ರೀಯ ಒಲಂಪಿಕ್ ಸಮಿತಿಯಿಂದ ಒಲಂಪಿಕ್ ಇತಿಹಾಸದ ವಿಶ್ವದ 16 ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.