ಕರ್ನಾಟಕದಲ್ಲಿ ಇಂದು 69 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆ…

155
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 69 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,158ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ ಉಡುಪಿ-16, ಯಾದಗಿರಿ-15, ಕಲಬುರಗಿ-14, ಬೆಂಗಳೂರು-6, ಧಾರವಾಡ-3, ಬಳ್ಳಾರಿ-3, ದಕ್ಷಿಣ ಕನ್ನಡ-3, ಕೋಲಾರ-2, ಮಂಡ್ಯ-2 ಬೆಳಗಾವಿ, ಬೀದರ್, ರಾಮನಗರ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದೊಂದು ಕೊರೊನಾ ಪಾಸಿಟಿವ್ ಪ್ರಕರಣ ದೃಢವಾಗಿದೆ.