ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 93 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2182ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಇಂದು ಮಧ್ಯಾಹ್ನದ ಹೆಲ್ತ್ ಬುಲೆಟಿನ್ನಲ್ಲಿ 69 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಸಂಜೆಯ ಹೆಲ್ತ್ ಬುಲೆಟಿನ್ನಲ್ಲಿ 24 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.










