ಬೀದರ್ : ಮಹಾಮಾರಿ ಕೊರೊನಾ ವೈರಸ್ ಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಬೀದರ್ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವ್ಯಕ್ತಿ ಈ ಮೊದಲೇ ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ವ್ಯಕ್ತಿಗೆ ಮೇ. 22ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ವ್ಯಕ್ತಿಗೆ ಬ್ರೀಮ್ಸ್ ಆಸ್ಪತ್ರೆಯ ಐಸೋಲೇಷನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಬ್ರೀಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಶಿವಕುಮಾರ್ ಅವರು ಮಾಹಿತಿ ತಿಳಿಸಿದ್ದಾರೆ.










