ಕರ್ನಾಟಕದಲ್ಲಿ ಇಂದು ಒಂದೇ ದಿನ 122 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2,405ಕ್ಕೆ ಏರಿಕೆ…

143
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 122 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,405ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಕಲಬುರಗಿ 28, ಯಾದಗಿರಿ16, ಹಾಸನ 15, ದಕ್ಷಿಣ ಕನ್ನಡ 11, ಬೀದರ್ 12, ಉಡುಪಿ 9, ಉತ್ತರ ಕನ್ನಡ 6, ರಾಯಚೂರು 5, ಬೆಳಗಾವಿ 4, ಬೆಂಗಳೂರು ನಗರ 6, ಚಿಕ್ಕಮಗಳೂರು 3, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 2, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢವಾಗಿದೆ.