ರಾಜ್ಯದಲ್ಲಿ ಇಂದು 135 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ…

159
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 135 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,418ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ 122 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ 13 ಮಂದಿಗೆ ಸೋಂಕು ತಗುಲ;ಇರುವುದು ದೃಢವಾಗಿದೆ.