ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,566 ಮಂದಿಗೆ ಕೊರೊನಾ ಸೋಂಕು-ಸೋಂಕಿತರ ಸಂಖ್ಯೆ 1,58,333ಕ್ಕೆ ಏರಿಕೆ…

185
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,566 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,58,333 ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಅಂದೇ ದಿನ 194ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4,531ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,58,333 ಮಂದಿ ಸೋಂಕಿತರ ಪೈಕಿ 67,692 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 86,110 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.