ಕರ್ನಾಟಕದಲ್ಲಿ ಇಂದು ಒಂದೇ ದಿನ 75 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆ…

186
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 75 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಉಡುಪಿ 27, ಹಾಸನ 13, ದಕ್ಷಿಣ ಕನ್ನಡ 6, ಬೆಂಗಳೂರು ನಗರ 7, ಯಾದಗಿರಿ 7, ಕಲಬುರಗಿ 3, ಚಿಕ್ಕಮಗಳೂರು-3, ರಾಯಚೂರು-1, ಚಿತ್ರದುರ್ಗ-6 ಹಾಗೂ ವಿಜಯಪುರ ಜಿಲ್ಲೆಯಲ್ಲಿ ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.