ಮಂಗಳೂರು : ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಳಾರ ಎಂಬಲ್ಲಿ ನಡೆದಿದೆ. ಅಬ್ದುಲ್ ಖಾದರ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮೃತ ಅಬ್ದುಲ್ ಖಾದರ್ ಅವರು ಪ್ರತಿದಿನ ನಮಾಜ್ ಮಾಡಲು ಮಸೀದಿಗೆ ಹೋಗುತ್ತಿದ್ದರು. ಅದರಂತೆ ಇಂದೂ ಕೂಡಾ ಮುಂಜಾನೆ 4 ಗಂಟೆ ಸುಮಾರಿಗೆ ನಮಾಜ್ ಮಾಡಲು ಮಸೀದಿಗೆ ತೆರಳಿ ನಮಾಜ್ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಅಬ್ದುಲ್ ಖಾದರ್ ಅವರು ನೆಲಕ್ಕೆ ಕುಸಿದು ಬಿದ್ದಿರುವುದನ್ನು ಗಮನಿಸಿದ ಮತ್ತೊಬ್ಬ ವ್ಯಕ್ತಿ ಅವರನ್ನು ಎಬ್ಬಿಸಲು ಮುಂದಾದಾಗ ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ವ್ಯಕ್ತಿ ಕುಸಿದು ಬೀಳುತ್ತಿರುವ ದೃಶ್ಯಗಳು ಮಸೀದಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.










