ಜಾನುವಾರುಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು…

195
firstsuddi

ದಾವಣಗೆರೆ : ಜಾನುವಾರುಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೆಚ್. ಗೋಪಗೊಂಡನಹಳ್ಳಿಯಲ್ಲಿ ನಡೆದಿದೆ. ಮನೋಜ್(14) ಹಾಗೂ ಮಹೇಶ(13) ಮೃತ ಬಾಲಕರು ಎಂದು ಗುರುತಿಸಲಾಗಿದ್ದು, ಮೃತ ಬಾಲಕರು ಹೆಚ್. ಗೋಪಗೊಂಡನಹಳ್ಳಿ ಗ್ರಾಮದ ಕೆರೆಯಲ್ಲಿ ತಮ್ಮ ಜಾನುವಾರುಗಳ ಮೈ ತೊಳೆಯಲು ಹೋಗಿದ್ದು, ಈ ವೇಳೆ ಬಾಲಕರು ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರೂ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹೊನ್ನಾಳಿ ಪೊಲೀಸರು ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿಗಳು ಶವಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.