ಛತ್ತೀಸ್‍ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ ವಿಧಿವಶ…

174
firstsuddi

ರಾಯ್‍ಪುರ್ : ಛತ್ತೀಸ್‍ಗಢದ ಮೊದಲ ಮುಖ್ಯಮಂತ್ರಿ ಅಜಿತ್ ಜೋಗಿ(74) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಜಿತ್ ಜೋಗಿ ಅವರಿಗೆ ಮೇ.9ರಂದು ಹೃದಯಾಘಾತವಾದ ಹಿನ್ನೆಲೆ, ರಾಯ್‍ಪುರದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅಜಿತ್ ಜೋಗಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದು, ಇವರು ಛತ್ತೀಸ್‍ಗಢ ರಾಜ್ಯ ಅಸ್ಥಿತ್ವಕ್ಕೆ ಬಂದ ಬಳಿಕ ನವೆಂಬರ್ 2000 ದಿಂದ 2003ರ ನವೆಂಬರ್ ವರೆಗೆ ಕಾಂಗ್ರೆಸ್ ಸರ್ಕಾರದಲ್ಲಿ ಮೊದಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು