ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು…

130
firstsuddi

ಶ್ರೀನಗರ : ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೈನಿಕರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಕುಲ್ಗಾಮ್‍ನ ವಾನ್ಪೋರಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದು ಯೋಧರು ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಪವೃತ್ತರಾದ ಸೈನಿಕರು ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಅವರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.