ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಸಂತೋಷ್ ಅವರನ್ನು ಮುಖ್ಯಮಂತ್ರಿ ಅವರ 4ನೇ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ತಿಪಟೂರು ತಾಲ್ಲೂಕಿನ ತಾಲ್ಲೂಕಿನ ನೊಣವಿನಕೆರೆ ಗ್ರಾಮದವರಾದ ಎನ್.ಆರ್. ಸಂತೋಷ್ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ದೂರದ ಸಂಬಂಧಿಯಾಗಿದ್ದು, ಇವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.










