ಮುಂಬೈ : ಮಹಾಮಾರಿ ಕೊರೊನಾ ವೈರಸ್ಗೆ ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್(42) ಅವರು ಬಲಿಯಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕಳೆದ ಕೆಲವು ತಿಂಗಳ ಹಿಂದೆ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು. ಬಳಿಕ ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಕಂಡುಬಂದಿದ್ದರಿಂದ ಮುಂಬೈನ ಸುರಾನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದರಿಂದ ವಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವಾಜಿದ್ ಖಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. 1998ರಲ್ಲಿ ಬಾಲಿವುಡ್ ಪ್ರವೇಶಿಸಿದ ಅವರು, ಹಲೋ ಬ್ರದರ್, ವಾಂಟೆಡ್, ದಬಾಂಬ್ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದರು.










