ಹೃದಯಾಘಾತದಿಂದ ಮೃತಪಟ್ಟ ಆ್ಯಂಬುಲೆನ್ಸ್ ಚಾಲಕನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಬಿಡುಗಡೆ…

153
firstsuddi

ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟ 108 ಆ್ಯಂಬುಲೆನ್ಸ್ ಚಾಲಕನ ಕುಟುಂಬಕ್ಕೆ ಸರ್ಕಾರ 5 ಲಕ್ಷ ರೂ. ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಮೇ.27ರಂದು ಜಿಲ್ಲೆಯ ನರಗುಂದ ತಾಲ್ಲೂಕಿನ ಕಣ್ಣೂರು ಗ್ರಾಮದ ನಿವಾಸಿ ಉಮೇಶ್(37) ಕೊರೊನಾ ಸಂಬಂಧಿತ ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಬಳಿಕ ತೀವ್ರ ಸಂಕಷ್ಠದಲ್ಲಿದ್ದ ಮೃತರ ಪತ್ನಿಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆ ಮಾಡಿ ಸಾಂತ್ವಾನ ಹೇಳಿ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದರು. ಅದರಂತೆ ಇಂದು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತ ಆ್ಯಂಬುಲೆನ್ಸ್ ಚಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ.