ಕೃಷಿ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ-8 ಮಂದಿ ಸಾವು…

176
firstsuddi

ಗುಜರಾತ್ : ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟಗೊಂಡು 8 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್‍ನ ಭುರತ್ ಜಿಲ್ಲೆಯ ದಾಹೆಜ್‍ನಲ್ಲಿರುವ ಕೃಷಿ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಕಾರ್ಮಿಕರು ಎಂದಿನಂತೆ ತಮ್ಮ ಕಾರ್ಯದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಬಾಯ್ಲರ್ ಸ್ಪೋಟಗೊಂಡಿದ್ದು, ಪರಿಣಾಮ 8 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 50 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಭುರತ್‍ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡ ತೀವ್ರತೆಗೆ ಅಕ್ಕಪಕ್ಕದ ಕಂಪನಿಗಳು ಹಾಗೂ ಮನೆಗಳ ಗ್ಲಾಸ್‍ಗಳು ಪುಡಿಯಾಗಿದ್ದು, ಪಕ್ಕದ ಕೆಲವು ಗ್ರಾಮದ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ತಿಳೀದು ಬಂದಿದೆ.