ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 257 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,320ಕ್ಕೆ ಏರಿಕೆಯಾಗಿದೆ. ಹಾಗೂ ಮಹಾಮಾರಿ ಕೊರೊನಾ ಸೋಂಕಿಗೆ ಇಂದು 4 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ಇಂದು ಉಡುಪಿ-92, ರಾಯಚೂರು-88, ಹಾಸನ-15, ಮಂಡ್ಯ-15, ದಾವಣಗೆರೆ-13, ಬೆಳಗಾವಿ-12, ಬೆಂಗಳೂರು ನಗರ-9, ದಕ್ಷಿಣ ಕನ್ನಡ-4, ಚಿಕ್ಕಬಳ್ಳಾಪುರ-2, ಗದಗ-2, ವಿಜಯಪುರ, ಮೈಸೂರು, ಬಳ್ಳಾರಿ, ತುಮಕೂರು ಹಾಗೂ ಹಾವೇರಿ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 4,320 ಮಂದಿ ಸೋಂಕಿತರ ಪೈಕಿ 1610 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 2651 ಮಂದಿ ಸೋಂಕಿತರು ರಾಜ್ಯದ ನಿಗಧಿತ ಆಸ್ಪತ್ರೆಗಳಳ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.










