ಟ್ರಕ್ ಹಾಗೂ ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿ-9 ಮಂದಿ ಸ್ಥಳದಲ್ಲೇ ಸಾವು…

154
firstsuddi

ಉತ್ತರಪ್ರದೇಶ : ಟ್ರಕ್ ಹಾಗೂ ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲಕ್ನೋ-ಪ್ರಯಾಗ್‍ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರೆಲ್ಲರು ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ರಾಜಸ್ಥಾನದಿಂದ ಬಿಹಾರ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು, ಮೂವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ವಾಬ್‍ಗಂಜ್‍ನ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.