ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ-ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮ…

242
firstsuddi

ಶ್ರೀನಗರ : ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಗಿದ್ದಾರೆ. ಜಮ್ಮು ಕಾಶ್ಮೀರಾದಲ್ಲಿ ಒಂದೆಡೆ ಉಗ್ರರು ದಾಳಿ ನಡೆಸುತ್ತಿದ್ದರೆ ಇನ್ನೊಂದೆಡೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ದಾಳಿ ನಡೆಸಿದ್ದು, ಪಾಕಿಸ್ತಾನ ಸೇನೆಯ ಶೆಲ್ ದಾಳಿಯಿಂದಾಗಿ ನಿನ್ನೆ ರಾತ್ರಿ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕರ್ತವ್ಯ ನಿರತರಾಗಿದ್ದ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.