ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 308 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,760ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಕಲಬುರಗಿ-99, ಯಾದಗಿರಿ-66, ಬೀದರ್-48, ಉಡುಪಿ-45, ಬೆಂಗಳೂರು-18, ಬಳ್ಳಾರಿ-8, ಗದಗ-6, ಶಿವಮೊಗ್ಗ-4, ಧಾರವಾಡ-4, ಹಾಸನ-3, ದಕ್ಷಿಣ ಕನ್ನಡ-3, ಬಾಗಲಕೋಟೆ-2, ಕೊಪ್ಪಳ, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 5,760 ಮಂದಿ ಸೋಂಕಿತರ ಪೈಕಿ 2,519 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3,175 ಮಂದಿ ಸೋಂಕಿತರು ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










