ಚಿತ್ರದುರ್ಗ : ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಹೂವಿನ ಹಡಗಲಿ ಮೂಲದ ಅಂದಾನಪ್ಪ(45) ಹಾಗೂ ಇಮ್ರಾನ್ ಪಾಷಾ(30) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತ ಅಂದಾನಪ್ಪ ಅವರು ತಮ್ಮ ಕಾರಿನಲ್ಲಿ ತಮ್ಮ ಸಂಬಂಧಿಕರನ್ನು ಬೆಂಗಳೂರಿಗೆ ಬಿಟ್ಟು ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪರಿಣಾಮ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










