ಮಹಾಮಾರಿ ಕೊರೊನಾ ಸೋಂಕಿಗೆ ತಮಿಳುನಾಡಿನ ಡಿಎಂಕೆ ಶಾಸಕ ಬಲಿ…

149
firstsuddi

ಚೆನ್ನೈ : ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆಯುತ್ತಲೇ ಇದ್ದು, ಮಹಾಮಾರಿ ಕೊರೊನಾ ವೈರಸ್‍ಗೆ ತಮಿಳುನಾಡಿನ ಡಿಎಂಕೆ ಶಾಸಕ ಜೆ.ಅನ್ಬಳಗನ್ ಅವರು ಬಲಿಯಾಗಿದ್ದಾರೆ. ಶಾಸಕ ಜೆ. ಅನ್ಬಳಗನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಬಳಿಕ ಚೆನ್ನೈನ ಕೋರಂಪೇಟ್‍ನಲ್ಲಿ ಇರುವ ಡಾ.ರೇಲಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್‍ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ವಿಪರ್ಯಾಸವೆಂದರೆ ಇಂದು ಅವರು ತಮ್ಮ 62ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದಾರೆ.