ಕೊಟ್ಟಿಗೆಹಾರ; ಬಣಕಲ್ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ದಿವಂಗತ ಎಸ್ ಮೋಹನ್‍ಕುಮಾರ್ ಶೆಟ್ಟಿ ಅವರ ಸ್ಮರಣಾರ್ಥ ಜೂನ್ 26 ರ ಶುಕ್ರವಾರ ರಕ್ತದಾನ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ ಎಂದು ಮೂಡಿಗೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಿವಂಗತ ಎಸ್ ಮೋಹನ್‍ಕುಮಾರ್ ಶೆಟ್ಟಿ ಬಣಕಲ್ ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಾಂಸ್ಕøತಿಕ, ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದವರು. ಕನ್ನಡ ನಾಡು ನುಡಿ ಕಟ್ಟುವಲ್ಲಿ ಅವಿರತವಾಗಿ ಶ್ರಮಿಸಿದವರು. ಅವರ ಸ್ಮರಣಾರ್ಥವಾಗಿ ಮೂಡಿಗೆರೆ ತಾಲ್ಲೂಕು ಹಾಗೂ ಬಣಕಲ್ ಹೋಬಳಿ ಕಸಾಪ, ಪೀಸ್ ಅಂಡ್ ಅವೇರ್ನೆಸ್ ಟ್ರಸ್ಟ್ ಮತ್ತು ಶ್ರೀವಿದ್ಯಾಭಾರತಿ ವಿದ್ಯಾಸಂಸ್ಥೆ ಬಣಕಲ್ ಗ್ರಾ.ಪಂ ಸಂಭಾಂಗಣ¨ದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಬಣಕಲ್ ಹೋಬಳಿ ಕಸಾಪ ಅಧ್ಯಕ್ಷ ವಸಂತ್ ಹಾರ್‍ಗೋಡು ಮಾತನಾಡಿ ಕರೊನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ರಕ್ತದಾನ ಮಾಡಲು ಆಸಕ್ತರಿರುವ ದಾನಿಗಳು ಮೊಬೈಲ್ ಸಂಖ್ಯೆ 9972041784 ಗೆ ಕರೆ ಮಾಡಿ ಹೆಸರು ನೊಂದಾಯಿಸಬಹುದು ಎಂದರು.
ಈ ಸಂದರ್ಭದಲ್ಲಿ ಪೀಸ್ ಅಂಡ್ ಅವೇರ್ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಪ್ ಬಿಳುಗುಳ, ಕಸಾಪ ಪಧಾಧಿಕಾರಿಗಳಾದ ಭಕ್ತೇಶ್, ಹಮೀದ್ ಸಬ್ಬೇನಹಳ್ಳಿ, ಜಯಪಾಲ್ ಮುಂತಾದವರು ಇದ್ದರು.
Home ಸ್ಥಳಿಯ ಸುದ್ದಿ ಮೂಡಿಗೆರೆ : ಜೂನ್ 26ರಂದು ದಿ|| ಮೋಹನ್‍ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ ಮತ್ತು ಸಸಿ ನೆಡುವ...










