ರಾಜ್ಯದಲ್ಲಿ ಇಂದು 120 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆ-ಮೂವರು ಬಲಿ…

166
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 120 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮೂವರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಬೆಂಗಳೂರು-42, ಯಾದಗಿರಿಯಲ್ಲಿ-27, ವಿಜಯಪುರದಲ್ಲಿ-13, ಕಲಬುರಗಿಯಲ್ಲಿ-11 ಬೀದರ್-5, ಧಾರವಾಡ-4, ದಕ್ಷಿಣ ಕನ್ನಡ-4, ಹಾಸನ-3, ಬಳ್ಳಾರಿ-3, ದಾವಣಗೆರೆ-3, ಬಾಗಲಕೋಟೆ-2, ರಾಮನಗರ-2 ಹಾಗೂ ಬೆಳಗಾವಿಯಲ್ಲಿ 1 ಕೊರೊನಾ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 6,041 ಮಂದಿ ಸೋಂಕಿತರ ಪೈಕಿ 2,862 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3,108 ಮಂದಿ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.