ಕಳೆದ 24 ಗಂಟೆಯಲ್ಲಿ ದೇಶದಲ್ಲಿ 9,996 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,86,579 ಲಕ್ಷಕ್ಕೆ ಏರಿಕೆ…

111
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 9,985 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,86,579ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಅಂದೇ ದಿನ 357 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 8,102 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,86,579 ಮಂದಿ ಸೋಂಕಿತರ ಪೈಕಿ 1,41,029ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 1,37,448 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.