ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 204 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮೂವರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಯಾದಗಿರಿ-66, ಉಡುಪಿ-22, ಬೆಂಗಳೂರು-17, ಕಲಬುರಗಿ-16, ರಾಯಚೂರು-15, ಬೀದರ್-14, ಶಿವಮೊಗ್ಗ-10, ದಾವಣಗೆರೆ-9, ಕೋಲಾರ-6, ಮೈಸೂರು-5, ರಾಮನಗರ-5, ವಿಜಯಪುರ-4, ಬಾಗಲಕೋಟೆ-3, ಉತ್ತರ ಕನ್ನಡ-3, ದಕ್ಷಿಣ ಕನ್ನಡ-2, ಹಾಸನ-2, ಬೆಂಗಳೂರು ಗ್ರಾಮಾಂತರ, ಕೊಪ್ಪಳ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 6,245 ಮಂದಿ ಸೋಂಕಿತರ ಪೈಕಿ 2,976 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3,195 ಮಂದಿ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










