ಶ್ರೀನಗರ : ದೇಶದಲ್ಲಿ ಒಂದೆಡೆ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದರೆ. ಇನ್ನೊಂದೆಡೆ ಗಡಿಯಲ್ಲಿ ಉಗ್ರರು ತಮ್ಮ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಲೇ ಇದ್ದು, ಜಮ್ಮು ಕಾಶ್ಮೀರಾದ ಕುಲ್ಗಾಮ್ ಜಿಲ್ಲೆ ಹಾಗೂ ಅನಂತ್‍ನಾಗ್ ಜಿಲ್ಲೆಗಳಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರಳಿಸುವಲ್ಲಿ ಭಾರತೀಯ ಸೈನಿಕರು ಯಶಸ್ವಿಯಾಗಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯನ್ನು ತಿಳಿದ ಪೊಲೀಸರು ಹಾಗೂ 19 ರಾಷ್ಟ್ರೀಯ ರೈಫಲ್ಸ್ ಹಾಗೂ ಮೀಸಲು ಪೊಲೀಸ್ ಪಡೆ ಪ್ರದೇಶವನ್ನು ಸುತ್ತುವರಿದರು. ಯೋಧರು ಸ್ಥಳಕ್ಕೆ ತೆರಳುತ್ತಿದ್ದಂತೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಭಾರತೀಯ ಸೈನಿಕರು ಕಳೆದ 7 ದಿನಗಳಲ್ಲಿ 16 ಮಂದಿ ಉಗ್ರರನ್ನು ಹೊಡೆದುರುಳಿಸಿದ್ದಾರೆ.










