ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಬಲಿ…

144
firstsuddi

ಬೆಂಗಳೂರು : ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆಯಾದಲ್ಲಿಂದಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರ ಜೊತೆಗೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಕೊರೊನಾ ಸೋಂಕಿನಿಂದ ಬಲಿಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗದೆ. 61 ವರ್ಷದ ಮಹಿಳೆ ಹಾಗೂ 57 ವರ್ಷದ ಪುರುಷ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಒಬ್ಬ ಸೋಂಕಿತನನ್ನು ರಾಜೀವ್ ಗಾಂಧಿ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಹಾಗೂ ಮತ್ತೊಬ್ಬ ಸೋಂಕಿತರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.