ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರೀದಿಗೆ ಕೊರೊನಾ ಪಾಸಿಟಿವ್…!

197
firstsuddi

ಲಾಹೋರ್ : ಮಹಾಮಾರಿ ಕೊರೊನಾ ವೈರಸ್ ಇಡೀ ವಿಶ್ವದಾಧ್ಯಂತ ತನ್ನ ಅಟ್ಟಹಾಸವನ್ನು ಮುಂದುವರೆಸುತ್ತಲೇ ಇದ್ದು, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರೀದಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ವಿಷಯವನ್ನು ಸ್ವತಃ ತಾವೇ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾನು ಗುರುವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದೇನೆ. ನನ್ನ ದೇಹದಲ್ಲಿ ಬಹಳ ನೋವು ಕಾಣಿಸಿಕೊಂಡಿತ್ತು. ದುರಾದೃಷ್ಟಾವಶಾತ್ ಕೊರೊನಾ ಪಾಸಿಟಿವ್ ದೃಢವಾಗಿದೆ. ಶೀಘ್ರವಾಗಿ ಗುಣಮುಖನಾಗಬೇಕು ಎಂದು ಅಲ್ಲಾಹುನಲ್ಲಿ ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದ್ದಾರೆ.