ಸ್ಯಾಂಡಲ್‍ವುಡ್ ನಟಿ ಶುಭ ಪೂಂಜಾಗೆ ಕೂಡಿ ಬಂತು ಕಂಕಣ ಭಾಗ್ಯ…

302
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ಶುಭಾ ಪೂಂಜಾ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಸುಮಂತ್ ಎಂಬ ಹುಡುಗನನ್ನು ವರಿಸಲಿದ್ದಾರೆ. ನಟಿ ಶುಭಾ ಪೂಂಜಾ ಹಾಗೂ ಜಯಕರ್ನಾಟಕ ಬೆಂಗಳೂರು ಸೌತ್ ವಿಂಗ್ ಪ್ರೆಸಿಡೆಂಟ್ ಆಗಿರುವ ಸುಮಂತ್ ಮಹಾಬಲಾ ಅವರು ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದು, ಇವರ ಪ್ರೀತಿ ಬಗ್ಗೆ ಇಬ್ಬರ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದು, ಇದಕ್ಕೆ ಇಬ್ಬರ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದು, ಇದೇ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ನಟಿ ಶುಭಾ ಪೂಂಜಾ ಅವರು “ಜಾಕ್ ಪಾಟ್ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಪಾದಾರ್ಪಾಣೆ ಮಾಡಿದ್ದು, ಕನ್ನಡದಲ್ಲಿ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಾಗೂ ತಮಿಳು ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದಾರೆ.