ಚೀನಾ ಸೇನೆಯ ಅಟ್ಟಹಾಸ : ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮ-ಚೀನಾದ 43 ಸೈನಿಕರ ಹತ್ಯೆ…

176
firstsuddi

ನವದೆಹಲಿ : ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ-ಚೀನಾ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಹಾಗೂ ಹಲವು ಸೈನಿಕರು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ನೋವು ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಚೀನಾದ ದಾಳೀಗೆ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆಯೂ ಕೂಡಾ ಚೀನಾ ಸೇನೆಯ 43 ಮಂದಿ ಸೈನಿಕರು ಹತ್ಯೆ ಮಾಡಿದ್ದಾರೆ. ಹಾಗೂ 100ಕ್ಕೂ ಹೆಚ್ಚು ಮಂದಿ ಚೀನಾ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆ. ಭಾರತ ಮತ್ತು ಚೀನಾ ಸೈನಿಕರು ಗಾಲ್ವಾನ್ ಕಣಿವೆಯಿಂದ ಹೊರ ಬಂದಿದ್ದಾರೆ. ಜೂನ್.15 ಹಾಗೂ 16ರಂದು ಗಡಿಯಲ್ಲಿ ನಡೆದ ದಾಳಿಯಲ್ಲಿ ನಮ್ಮ ಸೇನೆಯ 20 ಮಂದಿ ಯೋಧರು ಹುತಾತ್ಮರಾಗಿದ್ದು, 17 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.