ಶಿವಮೊಗ್ಗ : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಖಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಚನ್ನಗಿರಿ ಮೂಲದ 70 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮೃತ ವೃದ್ಧ ಅನಾರೋಗ್ಯದಿಂದ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮೃತ ವೃದ್ಧನ ಗಂಟಲು ದ್ರವ ಸಂಗ್ರಹಿಸಿ ಕೊನೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಬರುವ ಮುನ್ನವೇ ವೃದ್ಧ ಚಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಾವಿನ ಬಳಿಕ ಬಂದ ವರದಿಯಲ್ಲಿ ವೃದ್ಧನಿಗೆ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.










