ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ-ನಟ ಸಲ್ಮಾನ್ ಖಾನ್ ಸೇರಿದಂತೆ 8ಮಂದಿ ವಿರುದ್ಧ ಪ್ರಕರಣ ದಾಖಲು…

291
firstsuddi

ಪಾಟ್ನಾ : ಬಾಲಿವುಡ್ ನಟ ಸುಶಾಂತ್ ರಜಪೂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರೊಬ್ಬರು ಬಾಲಿವುಡ್‍ನ ಖ್ಯಾತ ನಟರು ಸೇರಿದಂತೆ 8 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಬಾಲಿವುಡ್‍ನ ಖ್ಯಾತ ನಟ ಸಲ್ಮಾನ್ ಖಾನ್, ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹಾರ್ ಹಾಗೂ ಏಕ್ತಾ ಕಪೂರ್ ಸೇರಿದಂತೆ ಒಟ್ಟು 8 ಮಂದಿ ವಿರುದ್ಧ ವಕೀಲ ಸುಧೀರ್ ಕುಮಾರ್ ಓಜಾ ಅವರು ಪಾಟ್ನಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸುಶಾಂತ್ ಅವರನ್ನು 7 ಸಿನಿಮಾಗಳಿಂದ ಕೈಬಿಡಲಾಗಿತ್ತು. ಹಾಗೂ ಕೆಲವು ಸಿನಿಮಾ ಬಿಡುಗಡೆಯಾಗಿರಲಿಲ್ಲ ಇದರಿಂದ ಮನನೊಂದು ಸುಶಾಂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ಬಾಲಿವುಡ್‍ನ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಕೀಲ ಸುಧೀರ್ ಕುಮಾರ್ ಅವರು ತಿಳಿಸಿದ್ದಾರೆ.