ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ಟೆಂಪೊವೊಂದು ರಸ್ತೆಯ ಸೂಚನೆಯ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಅಂಬಾಗಿಲು ಬಳಿ ಸಂಭವಿಸಿದೆ. ಮೃತರನ್ನು ಉದ್ಯಾವರದ ದಿನೇಶ್(35) ಮತ್ತು ಮಂಜು (30) ಎಂದು ಗುರುತಿಸಲಾಗಿದೆ. ಮೃತರು ಟೆಂಪೋದಲ್ಲಿ ಕುಂದಾಪುರದಿಂದ ಉದ್ಯಾವರಕ್ಕೆ ತರಕಾರಿ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದ್ದು. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ರವಾನಿಸಲಾಗಿದೆ.










