ಚಿಕ್ಕಮಗಳೂರು : ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ತರೀಕೆರೆ ತಾಲ್ಲೂಕಿನ ಅಜ್ಜಂಪುರ ಮೂಲದ 70 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೃತ ವೃದ್ಧೆ ಕಳೆದ ಕೆಲವು ದಿನಗಳ ಹಿಂದೆ ರೆಡ್ ಝೋನ್‍ನಲ್ಲಿರುವ ದಾವಣಗೆರೆಯ ಚನ್ನಗಿರಿಯಲ್ಲಿರುವ ಮಗಳ ಮನೆಗೆ ಹೋಗಿ ಬಂದಿದ್ದು, ಬಳಿಕ ವೃದ್ಧೆಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಬುಧವಾರ ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ವೃದ್ಧೆಯ ಗಂಟಲು ದ್ರವವನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ರವಾನಿಸಲಾಗಿತ್ತು. ಬಳಿಕ ವೃದ್ಧೆಗೆ ಕೊರೊನಾ ಕೊರೊನಾ ಸೋಂಕು ದೃಡವಾದ ಬಳಿಕ ಕೋವಿಡ್ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾದಂತಾಗಿದೆ.










