ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧರು ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 8 ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಹಾಗೂ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿಕುಳಿತಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿಯನ್ನು ತಿಳಿದ ಯೋಧರು ಕೂಡಲೇ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತೀಯ ಯೋಧರು 8 ಮಂದಿ ಉಗ್ರರನ್ನು ಹೊಡೆದುರುಳಿಸಿದ್ದು, ಇನ್ನಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.










