ಚಿಕ್ಕಮಗಳೂರು : ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ತಕ್ಷಣ ಧಾವಿಸಬೇಕು : ಡಿ.ಎಂ.ವಿಜಯ್.

159
firstsuddi

ಚಿಕ್ಕಮಗಳೂರು : ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ತಕ್ಷಣ ಧಾವಿಸಬೇಕು ಎಂದು ಕಿಸಾನ್ ಕಾಂಗ್ರೇಸ್‍ನ ಜಿಲ್ಲಾ ಕಾರ್ಯಾಧ್ಯಕ್ಷ ಡಿ.ಎಂ.ವಿಜಯ್ ಒತ್ತಾಯಿಸಿದರು.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶುಕ್ರವಾರ ಜಿಲ್ಲಾ ಕಿಸಾನ್ ಕಾಂಗ್ರೇಸ್ ವತಿಯಿಂದ ರೈತರಿಗೆ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು.
3 ತಿಂಗಳ ಕಾಲದ ಸತತ ಲಾಕ್‍ಡೌನ್‍ನಿಂದಾಗಿ ರೈತರು ಆರ್ಥಿಕವಾಗಿ ತತ್ತರಿಸಿದ್ದಾರೆ, ಮುಂಗಾರು ಮಳೆ ಸಹ ಈ ಬಾರಿ ಕಣ್ಣಾಮುಚ್ಚಾಲೆ ಆಡುತ್ತಿರುವುದರಿಂದ ಮಳೆಯನ್ನೇ ನಂಬಿ ಬಿತ್ತನೆ ಮಾಡಿರುವ ರೈತರು ಕಂಗಾಲಾಗಿದ್ದಾರೆ ಎಂದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೆ ಇನ್ನೂ ಹೆಚ್ಚಿನ ಆರ್ಥಿಕ ಪ್ಯಾಕೇಜ್ ನೀಡಬೇಕು, ಕೃಷಿಕರ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಗ್ರಾಮದ ರೈತರಿಗೆ ವಿವಿಧ ಬಿತ್ತನೆ ಬೀಜಗಳನ್ನು ವಿತರಿಸಲಾಯಿತು, ಚೀನಾದ ಸೈನಿಕರೊಂದಿಗೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಸೈನಿಕರ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷ ಮೌನಾಚರಣೆ ಮಾಡಲಾಯಿತು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಶಾಂತ್, ಆಲ್ದೂರು ಹೋಬಳಿ ಕಾಂಗ್ರೇಸ್ ಅಧ್ಯಕ್ಷ ಸಿ.ಸಿ.ಈರೇಗೌಡ, ಅಂಬಳೆ ಹೋಬಳಿ ಅಧ್ಯಕ್ಷ ಚಿಕ್ಕೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಗ್ರಾಮದ ಹಿರಿಯ ಕೆಂಚೇಗೌಡ ಹಾಜರಿದ್ದರು.