ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅವರಲ್ಲಿ ಹೆಚ್ಚು ಮಂದಿ ಹೊರರಾಜ್ಯದಿಂದ ಬಂದವರೇ ಆಗಿದ್ದು, ಹೀಗಾಗಿ ರಾಜ್ಯ ಸರ್ಕಾರ ತನ್ನ ಕ್ವಾರಂಟೈನ್ ನಿಯಮಾವಳಿಯನ್ನು ಬದಲಾವಣೆ ಮಾಡಿದೆ. ಇದೀಗ ಹೊರ ರಾಜ್ಯದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕಡ್ಡಾಯವಾಗಿ 14 ದಿನ ಕ್ವಾರಂಟೈನ್‍ನಲ್ಲಿ ಇರಿಸಲಾಗುವುದು. ಈ ಹಿಂದೆ ಕೇವಲ ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಉಳಿದ 7 ದಿನ ಹೋಂ ಕ್ವಾರಂಟೈನ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರ ತನ್ನ ನಿಯಮವನ್ನು ಬದಲಾವಣೆ ಮಾಡಿದ್ದು, ಇತರೆ ರಾಜ್ಯಗಳಿಂದ ಬಂದವರಿಗೂ ಅನ್ವಯಿಸುವಂತೆ ರಾಜ್ಯಕ್ಕೆ ಆಗಮಿಸಿದವರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಸೂಚಿಸಿದ್ದು, ಈ ಕುರಿತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
Karnataka is steadily maintaining a healthy recovery rate of 61.39% and mortality rate remains low at 1.49%. We are continuing to effectively trace all contacts of positive case within 24 hours and every inter-state arrival is being quarantined for 14 days.@CMofKarnataka pic.twitter.com/jjrueGg0EH
— Dr Sudhakar K (@mla_sudhakar) June 22, 2020










