ಚಿಕ್ಕಮಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ತಡೆಗಟ್ಟುವಂತೆ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಕೇಂದ್ರ ಸರ್ಕಾರಕ್ಕೆ ಒತ್ತಾಯ…

667
firstsuddi

ಚಿಕ್ಕಮಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ತಕ್ಷಣ ತಡೆಗಟ್ಟುವಂತೆ ಜಿಲ್ಲಾ ಯುವ ಕಾಂಗ್ರೇಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಕಳೆದ 4 ತಿಂಗಳಿನಿಂದ ಲಾಕ್‍ಡೌನ್‍ನಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ತತ್ತರಿಸಿದ್ದಾರೆ, ವ್ಯವಹಾರ, ಉದ್ಯೋಗವಿಲ್ಲದೇ ಕಂಗೆಟ್ಟಿದ್ದು ದಿನನಿತ್ಯದ ಜೀವನ ಸಾಗಿಸುವುದು ಹೇಗೆಂಬ ಚಿಂತೆಯಲ್ಲಿದ್ದಾರೆ ಎಂದು ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಹೇಳಿದ್ದಾರೆ.
ಕಳೆದ 8 ದಿನಗಳಿಂದ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಅದಕ್ಕೆ ಕಡಿವಾಣ ಹಾಕದೇ ಸುಮ್ಮನೆ ಕುಳಿತಿರುವ ಕೇಂದ್ರ ಸರ್ಕಾರ ಬಡವರು ಮತ್ತು ಮಧ್ಯಮ ವರ್ಗದವರ ಗಾಯದ ಮೇಲೆ ಬರೆ ಹಾಕುತ್ತಿದೆ, ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಇದೇ ರೀತಿ ಮುಂದುವರೆದಲ್ಲಿ ಪ್ರಯಾಣದ ವೆಚ್ಚ ದುಬಾರಿಯಾಗಲಿದ್ದು, ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಸಾಮಾನ್ಯ ಜನ ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿರುವ ಶಿವಕುಮಾರ್ ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆಯನ್ನು ತಡೆಗಟ್ಟಬೇಕು ಅಥವಾ ಪರ್ಯಾಯ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.