ಮಹಾಮಾರಿ ಕೊರೊನಾ ಸೋಂಕಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಬಲಿ…

120
firstsuddi

ಕೊಲ್ಕತ್ತಾ : ಮಹಾಮಾರಿ ಕೊರೊನಾ ವೈರಸ್‍ನಿಂದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್(60) ಬಲಿಯಗಿದ್ದಾರೆ. ಇವರಿಗೆ ಮೇ.23 ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಒಂದು ತಿಂಗಳಿನಿಂದ ಪಶ್ಚಿಮ ಬಂಗಾಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮೋನಾಶ್ ಘೋಷ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ತಮೋನಾಶ್ ಘೊಷ್ ಅವರ ಸಾವಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂತಾಪ ಸೂಚಿಸಿದ್ದಾರೆ.