ಚಿಕ್ಕಮಗಳೂರು : ಕಳೆದ 5 ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಎರಡೂವರೆ ಕೋಟಿಗೂ ಅಧಿಕ ವೆಚ್ಚದ ಅಭಿವೃದ್ದಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ವಸ್ತಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಪಿ.ರವಿ ಹೇಳಿದರು.
ತಾಲ್ಲೂಕಿನ ವಸ್ತಾರೆ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಇಂದು 14ನೇ ಹಣಕಾಸು ಯೋಜನೆಯಡಿ ಪಂಚಾಯಿತಿ ವ್ಯಾಪ್ತಿಯ ವಿಶಿಷ್ಟ ಚೇತನರಿಗೆ ಸೋಲಾರ್ ದೀಪಗಳನ್ನು ವಿತರಿಸಿ ಅವರು ಮಾತನಾಡಿದರು.
ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ದಿಗೆ ಶಕ್ತಿಮೀರಿ ಪಕ್ಷಾತೀತವಾಗಿ ಶ್ರಮಿಸಲಾಗಿದೆ, 20 ಹಳ್ಳಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು, ನಲ್ಲಿಗಳನ್ನು ಅಳವಡಿಸಲಾಗಿದೆ, ರಸ್ತೆ, ಚರಂಡಿ, ಬೀದಿ ದೀಪ, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ರಸ್ತೆ ಮತ್ತು ಕರೆಂಟ್ ಕಾಣದ ಕೆಲವು ಹಳ್ಳಿಗಳಿಗೆ ರಸ್ತೆ ಮತ್ತು ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ, ನಾಲ್ಕು ಕೆರೆಗಳನ್ನು ಅಭಿವೃದ್ದಿಪಡಿಸಲಾಗಿದೆ, ನಾಲ್ಕು ಮಳಿಗೆಗಳನ್ನು ನಿರ್ಮಿಸಲಾಗಿದೆ, 9 ಹಳ್ಳಿಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಸದಸ್ಯರು, ಕಛೇರಿ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ಸಹಕಾರದಿಂದಾಗಿ ಯಶಸ್ವಿಯಾಗಿ ಅಭಿವೃದ್ದಿ ಕೆಲಸಗಳನ್ನು ಮಾಡಲು ಸಾಧ್ಯವಾಯಿತು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ 19 ವಿಶಿಷ್ಟ ಚೇತನರಿಗೆ ಸಮಾರಂಭದಲ್ಲಿ ಸೋಲಾರ್ ದೀಪಗಳನ್ನು ವಿತರಿಸಲಾಯಿತು, ಗ್ರಾ.ಪಂ ಉಪಾಧ್ಯಕ್ಷೆ ಎಸ್.ಕೆ.ಜ್ಯೋತಿ, ಸದಸ್ಯರಾದ ವಿ.ಪಿ.ಸೋಮಶೇಖರ್, ಲಲಿತ, ಪಾರ್ವತಮ್ಮ, ಅನ್ನಪೂರ್ಣ, ರವಿಕುಮಾರ್, ಪಿಡಿಓ ಸುಮಾ, ಕಾರ್ಯದರ್ಶಿ ಉಷಾ ಉಪಸ್ಥಿತರಿದ್ದರು.










