ಮುಂಬೈ : ಬಾಲಿವುಡ್‍ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್(71) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 20ರಂದು ಮುಂಬೈನ ಬಾಂದ್ರಾದಲ್ಲಿರುವ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಜಾನೆ 1:50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸರೋಜ್ ಖಾನ್ ಅವರು 3 ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದರು.










