ಚಿಕ್ಕಮಗಳೂರು : ಮಹಾಮಾರಿ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿ…

188
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, 52 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ನಗರಕ್ಕೆ ಆಗಮಿಸಿದ ಮಹಿಳೆಗೆ ಕೆಮ್ಮು, ಜ್ವರ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಹಿಳೆಯ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ಬಳಿಕ ಬಂದ ವರದಿಯಲ್ಲಿ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಮಹಿಳೆಯನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.