ಮೂಡಿಗೆರೆ : ತಾಲ್ಲೂಕಿನ ಹಲವೆಡೆ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಕೂಡ ಗುಡ್ಡ ಕುಸಿಯುವ ಭೀತಿ ಇರುವುದರಿಂದ ಚಾರ್ಮಾಡಿ ಘಾಟ್‍ನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‍ನಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾನಿಯಾಗಿತ್ತು. ಬಳಿಕ 3-4 ತಿಂಗಳ ಕಾಲ ರಸ್ತೆ ದುರಸ್ತಿ ಕಾರ್ಯವನ್ನು ಆರಂಭಿಸಿ ಲಘು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಾರಿಯೂ ಕೂಡಾ ಭಾರಿ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಭೂ ಕುಸಿಯುವ ಸಾಧ್ಯತೆಯಿದ್ದು, ಈ ಮಾರ್ಗದಲ್ಲಿ ರಾತ್ರಿ ವೇಳೆ ವಾಹನ ಸಂಚರಿಸಲು ಸೂಕ್ತವಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದರು. ಈ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು, ಮುಂದಿನ ಆದೇಶ ಬರುವವರೆಗೂ ಪ್ರತಿ ದಿನ ರಾತ್ರಿ 7ಗಂಟೆಯಿಂದ ಬೆಳಿಗ್ಗೆ 7 ಗಂಟೆ ವರೆಗೆ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
Home ಸ್ಥಳಿಯ ಸುದ್ದಿ ಮೂಡಿಗೆರೆ : ಚಾರ್ಮಾಡಿ ಘಾಟ್‍ನಲ್ಲಿ ರಾತ್ರಿ 7ರಿಂದ ಬೆಳಿಗ್ಗೆ 7ರವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ...










