ದೇಶದಲ್ಲಿ ಕೊರೊನಾ ಸ್ಪೋಟ-ನಿನ್ನೆ ಒಂದೇ ದಿನ 26,506 ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆ…

142
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಬರೋಬ್ಬರಿ 26,506 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ 475 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 21,604ಕ್ಕೆ ಏರಿಕೆಯಾಗಿದೆ. ದೇಶದಲಿ 7,93,802ಮಂದಿ ಸೋಂಕಿತರ ಪೈಕಿ 4,95,513 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 2,76,685 ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.