ಚಿಕ್ಕಮಗಳೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾಗಿ ಬಿ.ಎನ್.ಚೌಡಪ್ಪ ಅವಿರೋಧ ಆಯ್ಕೆ…

370
firstsuddi

ಚಿಕ್ಕಮಗಳೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾಗಿ ಬಿ.ಎನ್.ಚೌಡಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಸಂಘಟನಾ ಸಂಚಾಲಕರುಗಳಾಗಿ ಎಚ್.ಇ ದೊಡ್ಡಯ್ಯ, ಚಂದ್ರಪ್ಪ, ಸಗುನಪ್ಪ, ಇಲಿಯಾಸ್ ಅಹಮದ್, ಕೃಷ್ಣ, ಅಣ್ಣಪ್ಪ, ಮೃತ್ಯುಜಯ, ಜಿಲ್ಲಾ ಖಜಾಂಚಿಯಾಗಿ ವಿ.ಧರ್ಮೇಶ್ ವಿಭಾಗೀಯ ಸಂಚಾಲಕರಾಗಿ ಬಾಲರಾಜ್ ಆಯ್ಕೆಯಾಗಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ಸಮಿತಿಯ ಕಚೇರಿಯಲ್ಲಿ ಶನಿವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು, ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್.ಮಲ್ಲಪ್ಪ, ಮಾಜಿ ಸಂಚಾಲಕ ಕೆ.ಸಿ.ವಸಂತಕುಮಾರ್ ಉಪಸ್ಥಿತರಿದ್ದರು.