ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭಾರತೀಯ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಕುಲ್ಗಾಮ್ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದ ಯೋಧರು ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಉಗ್ರರು ಯೋಧರತ್ತ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.










