ಕೊರೊನಾ ಲಾಕ್‍ಡೌನ್-ಜು.31ರ ವರೆಗೆ ಶಿಕ್ಷಕರು ಮನೆಯಿಂದಲೇ ಕೆಲಸ ಮಾಡುವಂತೆ ಶಿಕ್ಷಣ ಇಲಾಖೆಯಿಂದ ಆದೇಶ…

156
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಶಿಕ್ಷಕರು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಮಾಡುತ್ತಿರುವ ಶಿಕ್ಷಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಶಿಕ್ಷಕರು ಜುಲೈ 31ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಲವೊಂದು ನಿಯಮಗಳನ್ನು ವಿಧಿಸಿದೆ.
• ಶಿಕ್ಷಕರು ಯಾವುದೇ ಮಾಹಿತಿಯನ್ನು ನೀಡದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ.
• ಶಿಕ್ಷಕರನ್ನು ಸಂಪರ್ಕಕ್ಕೆ ಪಡೆಯಲು ದೂರವಾಣಿ ಸಂಖ್ಯೆ, ಇಮೇಲ್ ಐಡಿಯನ್ನು ನೀಡುವುದು.
• ಆರೋಗ್ಯದ ಹಿತದೃಷ್ಠಿಯಿಂದ ಎಲ್ಲಾ ಶಿಕ್ಷಕರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕು.
• ಆನ್‍ಲೈನ್ ಕ್ಲಾಸ್ ಮಾಡುವ ಶಿಕ್ಷಕರು ಮನೆಯಿಂದಲೇ ತರಗತಿಯನ್ನು ನಡೆಸಬೇಕು.